News Karnataka Kannada
Monday, April 29 2024
ಬೆಂಗಳೂರು

ಹಿಜಾಬ್ ನಿಷೇಧ: ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಧು ಬಂಗಾರಪ್ಪ

Hijab ban: Madhu Bangarappa says he will take action as per law
Photo Credit : News Kannada

ಬೆಂಗಳೂರು:  ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಸಿಎಂ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿರುವಂತೆ ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಮಧು ಬಂಗಾರಪ್ಪ ಶಾಲಾ-ಕಾಲೇಜುಗಳಲ್ಲಿ ಈ ಹಿಂದೆ ಹೇರಲಾಗಿದ್ದ ಹಿಜಾಬ್ ನಿಷೇಧ ಕ್ರಮವನ್ನು ಹಿಂತೆಗೆದುಕೊಳ್ಳುವ ಕುರಿತು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು  ಹೇಳಿದ್ದಾರೆ.

‘ಹಿಜಾಬ್  ವಿಚಾರದಲ್ಲಿ ಕಾನೂನು ಏನು ಹೇಳುತ್ತದೆ ಎಂಬುದನ್ನು ನೋಡಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಶಾಲಾ ಕಾಲೇಜುಗಳಲ್ಲಿ ಈ ಹೇಳಿಕೆಯಿಂದ ಗೊಂದಲ ಆಗಿದ್ದರೆ, ಏನು ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ಪಡೆದು ಚರ್ಚೆ ಮಾಡಿ ನಿರ್ದೇಶನ ನೀಡುತ್ತೇನೆ ಎಂದು ಹೇಳಿದರು.

ಈ ಬಗ್ಗೆ ಸಿಎಂ ಜೊತೆ ಮಾತನಾಡಿ ಮುಂದಿನ ತೀರ್ಮಾನ ಮಾಡಲಾಗುತ್ತದೆ. ಬಿಜೆಪಿ  ನಾಯಕರು ಇಂತಹ ವಿಚಾರದಲ್ಲಿ ರಾಜಕೀಯ ಮಾಡಲು ಹೋಗಿ ಜನ ಅವರನ್ನು ತಿರಸ್ಕರಿಸಿದ್ದಾರೆ.  ಇದು ಸೂಕ್ಷ್ಮವಾದ ವಿಚಾರವಾಗಿದ್ದು, ಎಲ್ಲಾ ಸಾಧಕ-ಬಾಧಕಗಳ ಬಗ್ಗೆ ಕಾನೂನು ತಜ್ಞರ ಜೊತೆ ಮಾತುಕತೆ ನಡೆಸುತ್ತೇವೆ. ನಾವು ಏನೇ ತೀರ್ಮಾನ ಮಾಡಿದರೂ ಅದು ಕಾನೂನು ತಜ್ಞರ ಸಲಹೆ ಪಡೆದು ಕಾನೂನಿನಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು