ಬೆಂಗಳೂರು: ಹಿಟ್ ಆ್ಯಂಡ್ ರನ್ಗೆ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ತಡರಾತ್ರಿ ಏರ್ಪೋಟ್ ರಸ್ತೆಯ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ರೋಹಿತ್ ( 22 ), ಸುಚಿತ್ ( 22 ), ಹರ್ಷಾ ( 22 ) ಮೃತ ವಿದ್ಯಾರ್ಥಿಗಳು. ಇವರೆಲ್ಲ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ರಾತ್ರಿ ವೇಳೆ ಲಾಂಗ್ ಡ್ರೈವಿಂಗ್ ಎಂದು ಬೈಕ್ನಲ್ಲಿ ಹೋಗಿದ್ದರು. ಈ ವೇಳೆ ಯಾವುದೋ ಅಪರಿಚಿತ ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದಾನೆ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.
ಅಪಘಾತದ ಭೀಕರತೆಗೆ ಹೆದ್ದಾರಿಯಲ್ಲಿ ನಜ್ಜು ಗುಜ್ಜಾದ ಸ್ಥಿತಿಯಲ್ಲಿ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿವೆ.ಮೃತದೇಹಗಳು ಅಂಬೇಡ್ಕರ್ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Ad