Bengaluru 24°C
Ad

ಜುಲೈ 4ರ ವರೆಗೆ ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ವಿಸ್ತರಣೆ

 ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ.

ಬೆಂಗಳೂರು: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ.

ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .

ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ.

ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ, ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ ಎಂದು ಹೇಳಿತು.

 

 

Ad
Ad
Nk Channel Final 21 09 2023
Ad