News Karnataka Kannada
Friday, May 03 2024
ಬೆಂಗಳೂರು

ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್: ಗಡುವು ವಿಸ್ತರಿಸಿದ ಸರ್ಕಾರ

HSRP Number Plate: Deadline Extended Govt
Photo Credit : News Kannada

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಕಡ್ಡಾಯ ಗಡುವನ್ನು 3 ತಿಂಗಳಿಗೆ ವಿಸ್ತರಣೆ ಮಾಡಿದೆ. ನವೆಂಬರ್ 17ಕ್ಕೆ ಅಂತ್ಯವಾಗಬೇಕಿದ್ದ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅವಧಿಯನ್ನು ಇದೀಗ ಫೆಬ್ರವರಿ 17ರ ವರೆಗೆ ವಿಸ್ತರಣೆ ಮಾಡಿದೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ. 90 ದಿನಗಳ ಕಾಲಾವಕಾಶವನ್ನು ಸರ್ಕಾರ ಕಲ್ಪಿಸಿದ್ದು, ಎಲ್ಲರೂ ಆದಷ್ಟು ಬೇಗ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕುವಂತೆ ಮನವಿ ಮಾಡಿದ್ದಾರೆ.

2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ವಾಹನಗಳು 90 ದಿನಗಳಲ್ಲಿ ಎಚ್‌ಎಸ್‌ಆರ್‌ಪಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಕೆಲ ಗೊಂದಲ, ಅವಧಿ ವಿಸ್ತರಣೆ ಬಳಿಕ ನವೆಂಬರ್ 17, 2023 ಕೊನೆಯ ದಿನಾಂಕ ನೀಡಲಾಗಿತ್ತು. ಇದರ ನಡುವೆ ಕೋರ್ಟ್‌ನಲ್ಲಿ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಗಡುವು ವಿಸ್ತರಿಸಲು ರಾಜ್ಯಕ್ಕೆ ಸೂಚನೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು