ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸುರೇಶ್ ಕುಮಾರ್, ನಾನು ಆರೋಗ್ಯವಾಗಿದ್ದೇನೆ. ಯಾರೂ ಆಂತಕ ಪಡಬೇಡಿ. ವೈದ್ಯರ ಸಲಹೆ ಮೇರೆಗೆ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ ಎಂದು ತಿಳಿಸಿದರು.
ಈ ಕುರಿತಂತೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಯಾರೂ ಅಂತಕ ಪಡಬೇಡಿ. ಮಾಧ್ಯಮಗಳಲ್ಲಿ ತಮ್ಮ ಅನಾರೋಗ್ಯ ಕುರಿತಂತೆ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ. ಕೆಲ ದಿನಗಳಿಂದ ಚಿಕೂನ್ ಗುನ್ಯಾ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

