ಬೆಂಗಳೂರು : ಇಂದು(ನವೆಂಬರ್ 03) ಬೆಳ್ಳಂಬೆಳಗ್ಗೆ ಬೆಂಗಳೂರಿನ ಹಲವೆಡೆ ಬಿಲ್ಡರ್ಸ್ ಮನೆಗಳ ಮೇಲೆ ಐಟಿ ದಾಳಿ ಮಾಡಿ,ಬಿಲ್ಡರ್ಸ್ಗೆ ಶಾಕ್ ಕೊಟ್ಟಿದೆ. ರಾಜ್ಯದಲ್ಲಿ ಹಲವೆಡೆ ಜ್ಯುವೆಲರ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದ ಐಟಿ ಅಧಿಕಾರಿಗಳು, ಈ ಬಾರಿ ಬಿಲ್ಡರ್ಸ್ ಮನೆಗಳ ಮೇಲೆ ದಾಳಿ ಮಾಡಿದೆ.
ಕಳೆದ ಹಲವು ದಿನಗಳಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಐಟಿ ದಾಳಿ ನಡೆಸುತ್ತಿದೆ. ಉಡುಪಿ ಹಾಗೂ ಮಂಗಳೂರು ಭಾಗದಲ್ಲಿ ಚಿನ್ನಾಭರಣ ಅಂಗಡಿಗಳ ಮೇಲೆ ಐಡಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಬಿಲ್ಡರ್ಸ್ ಮನೆ ಮೇಲೆ ದಾಳಿ ನಡೆಸಿದೆ.