News Karnataka Kannada
Monday, May 06 2024
ಬೆಂಗಳೂರು

ಬೆಂಗಳೂರಿನಲ್ಲಿ ಐಟಿ ದಾಳಿ: ಕಾಫಿ ಬೋರ್ಡ್‌ ನಿರ್ದೇಶಕರ ನಿವಾಸದಲ್ಲಿ ಪರಿಶೀಲನೆ

In another IT raid, rs 40 crore was seized from the builder's residence. Detection
Photo Credit : IANS

ಬೆಂಗಳೂರು: ಅ.10ರಂದು ಹೊಸಕೋಟೆಯ ಬಿರಿಯಾನಿ ಸೆಂಟರ್‌ ಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಇದೀಗ ಗುರುವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ. ತೆರಿಗೆ ವಂಚನೆ ಸಂಬಂಧ ಕಳೆದ ವಾರ ಚಿನ್ನದ ವ್ಯಾಪಾರಿಗಳ ಮೇಲೆ ದಾಳಿ ನಡೆದಿತ್ತು.

ದಾಳಿ ವೇಳೆ ಪತ್ತೆಯಾದ ಹಲವಾರು ದಾಖಲಾತಿ ಆಧಾರದ ಮೇಲೆ ಐಟಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದಾರೆ. ಈ ಹಿಂದೆ ದಾಳಿ ಮಾಡಿದ್ದ ವೇಳೆ ಚಿನ್ನದ ವ್ಯಾಪಾರಿಗಳ ಜೊತೆ ಕಾಫಿ ಬೋರ್ಡ್ ನಿರ್ದೇಶಕ ವ್ಯವಹಾರ ನಡೆಸಿರುವ ದಾಖಲೆಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಇಂದು ಐಟಿ ಅಧಿಕಾರಿಗಳು ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು