ಬೆಂಗಳೂರು

ಫುಟ್‌ಪಾತ್‌ನಲ್ಲಿ ಅಕ್ರಮ ಅಂಗಡಿಗಳ ತೆರವು: ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜಯನಗರದಲ್ಲಿ ನಡೆದಿದೆ.

ಮೃತನನ್ನು ಕೃಷ್ಣ(49) ಎಂದು ಗುರುತಿಸಲಾಗಿದೆ.

ಜಯನಗರದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ  ವ್ಯಾಪಾರ ನಡೆಸುತ್ತಿದ್ದರು, ಅಧಿಕಾರಿಗಳು ಇವರ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನಲೆ ಹಾಗೂ ಅಂಗಡಿ ಕೆಡವಿದ ಹಿನ್ನಲೆ ಮನನೊಂದು ಈ ಘಟನೆ ಸಂಭವಿಸಿದೆ. ಇನ್ನು ಈ ಘಟನೆ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ನವೆಂಬರ್​​​​​ 07 ರಂದು ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿತ್ತು. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿತ್ತು.

ಬಳಿಕ ಈ ಕುರಿತು ಮಾತನಾಡಿದ್ದ ಉಸ್ತುವಾರಿ ಅಧಿಕಾರಿ ಸೋಮಶೇಖರ್​,  ‘ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿ ಫುಟ್ ಪಾತ್ ತೆರವು ಮಾಡಬೇಕು ಎಂದು 6 ತಿಂಗಳ ಹಿಂದೆ ಹೇಳಲಾಗಿತ್ತು. ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು. ಅಷ್ಟೇ ಅಲ್ಲ, ನವೆಂಬರ್ 4 ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿದ್ದೇವು. ಆ ಹಿನ್ನೆಲೆ ನಾವು ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಹೇಳಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

6 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

6 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

6 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

7 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

7 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

7 hours ago