News Karnataka Kannada
Saturday, May 04 2024
ಬೆಂಗಳೂರು

ಬೋಲ್ಡ್ ಆಗಿ ಮನೆಯಲ್ಲಿದ್ದೇನೆ, ರಾಜ್ಯಾಧ್ಯಕ್ಷನಾದರೆ ಸಿಕ್ಸ್‌ ಗ್ಯಾರಂಟಿ: ಬಿಜೆಪಿ ಮುಖಂಡ ಸೋಮಣ್ಣ

I'm at home bold, six guaranteed if I become state president: BJP leader Somanna
Photo Credit : Facebook

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಜೂನ್ 25 ರಾಜ್ಯ ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ, ಚುನಾವಣೆ ಸೋಲಿನ ಬಳಿಕ ಮೊದಲ ಬಾರಿ ಕಚೇರಿಗೆ ಬಂದಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು