News Karnataka Kannada
Thursday, May 02 2024
ಬೆಂಗಳೂರು

11 ಜಿಲ್ಲೆಗಳಿಗೆ ಮಳೆ ಅಲರ್ಟ್‌ ನೀಡಿದ ಹವಾಮಾನ ಇಲಾಖೆ

ದೆಹಲಿ, ಉತ್ತರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ, ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಹಮೀರ್‌ಪುರ, ಬಂದಾ ಮತ್ತು ಜಲೌನ್‌ನಲ್ಲಿ ಭಾರೀ ಮಳೆಯೊಂದಿಗೆ ಆಲಿಕಲ್ಲು ಕೂಡ ಬಿದ್ದಿದೆ.
Photo Credit : News Kannada

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಮಳೆಯಾಗಿದೆ. ಇನ್ನು ಭಾನುವಾರದ ಮಳೆಯಾಗುವ ಪ್ರದೇಶಗಳ ವಿವರ ಹೀಗಿದೆ.

ದಕ್ಷಿಣ ಒಳನಾಡಿನ ಮೈಸೂರಿನಲ್ಲಿ ಪ್ರತ್ಯೇಕ ಕಡೆಗಳಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದರೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಹಾವೇರಿ, ಧಾರವಾಡ ಮತ್ತು ಬೆಳಗಾವಿಯಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆ ಸುರಿಯಲಿದೆ. ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣವಿರಲಿದೆ. ಮಧ್ಯಾಹ್ನ ಬಿಸಿಲು ಇರಲಿದೆ. ಸಂಜೆ ಅಥವಾ ರಾತ್ರಿಯಂದು ಆಯ್ದ ಕಡೆಗಳಲ್ಲಿ ಮಳೆ ಇರಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 6

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು