News Karnataka Kannada
Monday, May 13 2024
ಬೆಂಗಳೂರು

ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ

Heavy rains lash several parts of Karnataka, including Bengaluru, for two days
Photo Credit : News Kannada

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಅಕ್ಟೋಬರ್ 21ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಶಿರಾಲಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 16.2 ಡಿಗ್ರಿ ಸೆಲ್ಸಿಯಸ್​ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉಡುಪಿ, ಬೆಂಗಳೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಧ್ಯಾಹ್ನದ ನಂತರ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು