ಬೆಂಗಳೂರು : 7ನೇ ವೇತನ ಆಯೋಗ ಜಾರಿ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಕೊನೆಗೂ ಇಡೇರಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 7ನೇ ವೇತನ ಆಯೋಗ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ತೀರ್ಮಾನ ಕೈಗೊಂಡಿದ್ದು, ಸರ್ಕಾರಿ ನೌಕರರಲ್ಲಿ ಸಂತಸ ಮೂಡಿದೆ.7ನೇ ವೇತನ ಆಯೋಗದ ಶಿಫಾರಸುಗಳು ಆಗಸ್ಟ್​ 1ರಿಂದ ಅನ್ವಯವಾಗುವಂತೆ ಜಾರಿಯಾಗಲಿದೆ.

ಆಯೋಗ ಸರ್ಕಾರಿ ನೌಕರರ ವೇತನವನ್ನು ಶೇ 27.5ರಷ್ಟು ಹೆಚ್ಚಳ ಮಾಡುವಂತೆ 244 ಪುಟಗಳ ವರದಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಆಯೋಗದ ಶಿಫಾರಸ್ಸಿನಂತೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ 2023ರ ಏಪ್ರಿಲ್​ 1ರಿಂದ ಅನ್ವಯವಾಗುವಂತೆ ಶೇ17ರಷ್ಟು ವೇತನವನ್ನು ಹೆಚ್ಚಳ ಮಾಡಿದ್ದರು.

ಬಾಕಿ ಉಳಿದಿರುವ ಶೇ10.5 ರಷ್ಟು ವೇತನವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದಾರೆ. ಇದು ಆಗಸ್ಟ್​ 1ರಿಂದ ಜಾರಿಯಾಗಲಿದೆ. ಈ ಮೂಲಕ ಶೇ 17 ಮತ್ತು ಶೇ 10.5 ರಷ್ಟು ಸೇರಿ ಒಟ್ಟು ಶೇ 27ರಷ್ಟು ವೇತನ ಹೆಚ್ಚಿಸಲಾಗುತ್ತದೆ. ಇದರಿಂದ ಆರಂಭಿಕ ನೌಕರರ ಕನಿಷ್ಠ ವೇತನ 17 ಸಾವಿರದಿಂದ 27 ಸಾವಿರಕ್ಕೆ ಏರಿಕೆಯಾಗಿದೆ.