Bengaluru 21°C
Ad

ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಶೀಘ್ರ ಪ್ರವಾಸೋದ್ಯಮ ನೀತಿ ಜಾರಿ : ಡಿ.ಕೆ.ಶಿ

ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಕರ್ನಾಟಕ ಸರ್ಕಾರ ಪ್ರವಾಸೋದ್ಯಮದ ಅಭಿವೃದ್ದಿಗೆ ಬದ್ದವಾಗಿದ್ದು, ಹೆಚ್ಚು ಬಂಡವಾಳ ಹೂಡಿಕೆದಾರರ ಆಕರ್ಷಣೆಗೆ ಪ್ರವಾಸೋದ್ಯಮ ನೀತಿ ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಾಹಾಸಂಸ್ಥೆ (ಎಫ್ ಕೆಸಿಸಿಐ) ಮತ್ತು ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ದಕ್ಷಿಣ ಭಾರತ ಉತ್ಸವ ಕಾರ್ಯಕ್ರಮದಲ್ಲಿ ಶನಿವಾರ ಭಾಗವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ನೀತಿಯಿಂದ ಹೆಚ್ಚು ಬಂಡವಾಳ ಹೂಡಿಕೆದಾರರನ್ನು ಸೆಳೆಯಬಹುದು. ಕೈಗಾರಿಕೋದ್ಯಮಿಗಳು ಬಲಗೊಂಡಷ್ಟು ಸರ್ಕಾರವು ಬಲಗೊಳ್ಳುತ್ತದೆ ಎಂದು ಅಭಿಪ್ರಾಯಪಟ್ಟರು.

ಆಂಧ್ರ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣದಿಂದ ಬಂದಿರುವ ಪ್ರತಿನಿಧಿಗಳು ನಿಮ್ಮ ಅನುಭವಗಳನ್ನು ಹಂಚಿಕೊಳ್ಳಬೇಕು. ನೀರಾವರಿ ಹಾಗೂ ಬೆಂಗಳೂರು ಅಭಿವೃದ್ದಿ ಸಚಿವನಾಗಿ ನನ್ನ ಕಾರ್ಯಕ್ಷೇತ್ರಗಳ ಅಭಿವೃದ್ದಿಗೆ ಸಲಹೆ ಸೂಚನೆಗಳನ್ನು ನಾನು ನಿರೀಕ್ಷೆ ಮಾಡುತ್ತೇನೆ. ಬೆಂಗಳೂರು ಐಟಿ, ಬಿಟಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸದೃಢವಾಗಿದೆ. ಇದರ ಜೊತೆಗೆ ಬೆಂಗಳೂರು ಹೆಚ್ಚಿನ ಪ್ರಮಾಣದಲ್ಲಿ ಪ್ರವಾಸಿಗರನ್ನು ಸೆಳೆಯಲು ಕಾರ್ಯಸೂಚಿ ಸಿದ್ಧಪಡಿಸಬೇಕು ಎಂದರು.

ಈ ಹಿಂದೆ ಕಬ್ಬನ್ ಪಾರ್ಕ್, ಲಾಲ್ ಬಾಗ್ ಪ್ರವಾಸಿಗರನ್ನು ಸೆಳೆಯುತ್ತಿದ್ದವು. ಈಗ ಹೊಸ ಪೀಳಿಗೆಗೆ ಹೊಸತನ್ನು ನೀಡಬೇಕಿದೆ. ಈ ಕಾರಣಕ್ಕೆ ಸ್ಕೈ ಡೆಕ್ ನಿರ್ಮಾಣಕ್ಕೆ ಯೋಜನೆ ಹಾಕಿಕೊಂಡಿದ್ದೇವೆ. ಪ್ರಸಿದ್ಧವಾದ ಅನೇಕ ನಗರಗಳಲ್ಲಿ ಎತ್ತರವಾದ ಗೋಪುರಗಳು ಆಕರ್ಷಣೀಯ ಕೇಂದ್ರಗಳಿವೆ. ಅದರಂತೆ ಬೆಂಗಳೂರಿನಲ್ಲೂ ಇರಲಿ ಎಂದು ಈ ಯೋಜನೆ ಮಾಡಲಾಗಿದೆ. ಮುಂದಿನ 8- 10 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದರು.

Ad
Ad
Nk Channel Final 21 09 2023
Ad