ಬೆಂಗಳೂರು: ಇನ್ನು ಮುಂದೆ ಐತಿಹಾಸಿಕ ಸ್ಥಳಗಳ ವಿರೂಪ ಅಥವಾ ಸ್ಮಾರಕಗಳನ್ನು ನಾಶಪಡಿಸಿದರೆ ಜೈಲು ಶಿಕ್ಷೆ ಖಚಿತವಾಗಿದ್ದು, ಐತಿಹಾಸಿಕ ಸ್ಥಳ, ಸ್ಮಾರಕಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕರ್ನಾಟಕ ಪ್ರಾಚೀನ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಅವಶೇಷಗಳ ವಿಧೇಯಕ 2024 ಬಿಲ್ ವಿಧಾನ ಪರಿಷತ್‌ನಲ್ಲಿ ಮಂಡನೆಯಾಗಿ ಅಂಗೀಕಾರಗೊಂಡಿದೆ.
ವಿಧಾನ ಪರಿಷತ್‌ನಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಅವರು ಕರ್ನಾಟಕ ಪ್ರಾಚೀನ ಐತಿಹಾಸಿಕ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳ ಅವಶೇಷಗಳ ವಿಧೇಯಕ 2024 ಬಿಲ್ ಮಂಡಿಸಿದರು.
ಇದರಲ್ಲಿ ಪ್ರಾಚೀನ ಹಾಗೂ ಐತಿಹಾಸಿಕ ಸ್ಮಾರಕ ದತ್ತು ತೆಗೆದುಕೊಳ್ಳಲು ಅವಕಾಶ ನೀಡಲಾಗಿದ್ದು, ಐತಿಹಾಸಿಕ ಸ್ಥಳ ಅಥವಾ ಸ್ಮಾರಕಗಳನ್ನು ನಾಶಪಡಿಸಿದರೆ ಮೂರು ತಿಂಗಳ ಕಠಿಣ ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶ ನೀಡಲಾಗಿದೆ.
ಎಚ್.ಕೆ.ಪಾಟೀಲ್ ಅವರು ವಿಧೇಯಕದ ಬಗ್ಗೆ ಮಾತನಾಡಿ, ಪ್ರಾಚೀನ ಮತ್ತು ಐತಿಹಾಸಿಕ ಸ್ಮಾರಕ ಮತ್ತು ಪುರಾತತ್ವ ಸ್ಥಳಗಳ ಸಂರಕ್ಷಣೆ ಮಾಡುವ ಕರ್ತವ್ಯವಿದೆ. ಸ್ಮಾರಕಗಳನ್ನು ದತ್ತು ತೆಗೆದುಕೊಳ್ಳಲು ಈ ವಿಧೇಯಕ ಅವಕಾಶ ಮಾಡಿಕೊಡಲಿದೆ. ಸೊಸೈಟಿ, ಸಹಕಾರ ಸಂಘಗಳು, ಟ್ರಸ್ಟ್ಗಳು, ಸರ್ಕಾರೇತರ ಸಂಸ್ಥೆಗಳು ಆಸಕ್ತಿಯುಲ್ಳ ವ್ಯಕ್ತಿಗಳನ್ನು ಸ್ಮಾರಕ ಪಟ್ಟಿಯಲ್ಲಿ ಸೇರಿಸಲು ತಿದ್ದುಪಡಿ ತರಲಾಗಿದೆ ಎಂದು ಹೇಳಿದರು.

