Bengaluru 22°C
Ad

ರಾಜ್ಯದಲ್ಲಿ ಡೆಂಗ್ಯೂ ಮಾರಿ : ಒಂದೇ ದಿನ 197 ಕೇಸು, 1 ಸಾವು

ರಾಜ್ಯದಲ್ಲಿ ಡೆಂಗ್ಯೂ ರೌದ್ರವತಾರವಾಡುತ್ತಿದೆ. ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ರೌದ್ರವತಾರವಾಡುತ್ತಿದೆ. ಸೋಮವಾರ ಒಂದೇ ದಿನ 197 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದು ಮೈಸೂರಿನಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಆ ಮೂಲಕ ಡೆಂಗ್ಯೂವಿನಿಂದ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

Ad
300x250 2

ಜು. 8ರಂದು 892 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದ್ದು ಅವರಲ್ಲಿ ಹೊಸದಾಗಿ ಡೆಂಗ್ಯೂ ಪೀಡಿತರಾದವರಲ್ಲಿ 1 ವರ್ಷದೊಳಗಿನ ಒಂದು ಮಗುವಿನಲ್ಲಿ, 18 ವರ್ಷದೊಳಗಿನ 63 ಮಂದಿ, 18 ವರ್ಷ ಮೇಲ್ಪಟ್ಟ 133 ಮಂದಿಯಲ್ಲಿ ಡೆಂಗ್ಯೂ ದೃಢವಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 46 ಡೆಂಗ್ಯೂ ಪೀಡಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವರ್ಷ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,362ಕ್ಕೆ ಏರಿಕೆಯಾಗಿದೆ.

ಚಿಕ್ಕಮಗಳೂರಿನಲ್ಲಿ 563, ಮೈಸೂರಿನಲ್ಲಿ 496, ಹಾವೇರಿಯಲ್ಲಿ 481, ಶಿವಮೊಗ್ಗದಲ್ಲಿ 308 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹಾಸನದಲ್ಲಿ 2, ಬೆಂಗಳೂರು, ಮೈಸೂರು, ಶಿವಮೊಗ್ಗ, ಧಾರವಾಡ, ಹಾವೇರಿಯಲ್ಲಿ ತಲಾ ಒಬ್ಬರು ಡೆಂಗ್ಯೂಯಿಂದ ಮೃತಪಟ್ಟಿದ್ದಾರೆ. ಇದುವರೆಗೆ ಒಟ್ಟು 55712 ಶಂಕಿತ ವ್ಯಕ್ತಿಗಳ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Ad
Ad
Nk Channel Final 21 09 2023
Ad