ಅಖಿಲ ಭಾರತ ಸ್ವಚ್ಛ ಸರ್ವೇಕ್ಷಣಾ: ಬೆಂಗಳೂರಿಗೆ 125 ನೇ ಸ್ಥಾನ

ಬೆಂಗಳೂರು: ಅಖಿಲ ಭಾರತ ಸ್ವಚ್ಛ ಸರ್ವೇಕ್ಷಣಾ 2023 ವರದಿಯಲ್ಲಿ ಬೆಂಗಳೂರು 125 ನೇ ಸ್ಥಾನದಲ್ಲಿದೆ.  2022 ರ ಸ್ವಚ್ಛ ಸರ್ವೇಕ್ಷಣ ಶ್ರೇಯಾಂಕದಲ್ಲಿ, ಬೆಂಗಳೂರು ನಗರವು 43ನೇ ಸ್ಥಾನದಲ್ಲಿತ್ತು. 2021ರಲ್ಲಿ 28ನೇ ಮತ್ತು 2020ರಲ್ಲಿ 37ನೇ ಸ್ಥಾನದಲ್ಲಿತ್ತು.

ಸ್ವಚ್ಛ ಸರ್ವೇಕ್ಷಣ 2023ರ ವರದಿಯ ಪ್ರಕಾರ, ಕರ್ನಾಟಕದ ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಜನಸಂಖ್ಯೆಯ ವರ್ಗದಲ್ಲಿರುವ 25 ನಗರಗಳಲ್ಲಿ, ಬಿಬಿಎಂಪಿ ಮೂರನೇ ಸ್ಥಾನದಲ್ಲಿದೆ. ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಮೈಸೂರು ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳು ಪಡೆದುಕೊಂಡಿವೆ.

ವರದಿಯ ಪ್ರಕಾರ, ಮೂಲದಲ್ಲಿ ತ್ಯಾಜ್ಯವನ್ನು ಬೇರ್ಪಡಿಸುವ ವಿಭಾಗದಲ್ಲಿ ಬೆಂಗಳೂರು ಶೇಕಡಾ 99ರಷ್ಟು ಸಾಧಿಸಿದೆ. ಆದರೆ ತ್ಯಾಜ್ಯ ವಿಲೇವಾರಿ ಪರಿಹಾರದಲ್ಲಿ ಶೂನ್ಯ ಸಾಧನೆ ಮಾಡಿದೆ. ನಗರವು ಸೇವಾ ಮಟ್ಟದ ಪ್ರಗತಿ ವಿಭಾಗದಲ್ಲಿ 4,830 ಅಂಕಗಳಿಗೆ 2,805.32 ಅಂಕಗಳು, ಪ್ರಮಾಣೀಕರಣ ವಿಭಾಗದಲ್ಲಿ 2,500ರಲ್ಲಿ 1,125 ಮತ್ತು ನಾಗರಿಕರ ಧ್ವನಿ ವಿಭಾಗದಲ್ಲಿ 2,170 ರಲ್ಲಿ 1,589.82 ಅಂಕಗಳನ್ನು ಗಳಿಸಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago