ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಹಾರುವ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ ಆರು ಮಂದಿ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದರೂ ವಿಮಾನ ನಿಗದಿತ ನಿರ್ಗಮನ ಸಮಯಕ್ಕಿಂತ 12 ನಿಮಿಷ ಬೇಗ ಟೇಕಾಫ್ ಆಗಿದೆ. ಇದರಿಂದ ಪ್ರಯಾಣಿಕರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪರದಾಡುವಂತಾದ ಘಟನೆ ಶುಕ್ರವಾರ ನಡೆದಿದೆ.
ಸರ್ಕಾರಿ ಅಧಿಕಾರಿಯಾಗಿರುವ ಪ್ರಯಾಣಿಕರೊಬ್ಬರ ಪ್ರಕಾರ, ಇಂಡಿಗೋ ವಿಮಾನವು ಮಧ್ಯಾಹ್ನ 2.55 ಕ್ಕೆ ಹೊರಡಬೇಕಿತ್ತು, ಆದರೆ 2.43 ಕ್ಕೆ (ಏರ್ಲೈನ್ನ ವೆಬ್ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ) ಟೇಕ್ ಆಫ್ ಆಗಿದೆ. 6 ಮಂದಿ ಪ್ರಯಾಣಿಕರನ್ನು ಬಿಟ್ಟು ವಿಮಾನ ಹೊರಟಿದೆ. ಈ ಹಿನ್ನೆಲೆ ಪ್ರಯಾಣಿಕರು ಪ್ರತಿಭಟನೆ ನಡೆಸಿದ್ದು ಇಂಡಿಗೋ ಬೇರೆ ವ್ಯವಸ್ಥೆ ಕಲ್ಪಿಸಿದೆ.