News Karnataka Kannada
Saturday, May 04 2024
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗಳಲ್ಲಿ ಊಟದ ದರ ಹೆಚ್ಚಳ: ಈಗ ರೇಟ್‌ ಎಷ್ಟು ಗೊತ್ತಾ

188 new Indira canteens to be opened
Photo Credit : IANS

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಂಕ್ಷೆಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆಯನ್ನು 60 ರೂ.ಗೆ ನಿಗದಿ ಮಾಡಲಾಗಿದೆ. ಆದರೆ ಗ್ರಾಹಕರಿಂದ ಕೇವಲ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದಿರಾ ಕ್ಯಾಂಟೀನ್‌ ಊಟದ ದರ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ, ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆಯಾಗಲಿದೆ. ಉಳಿದಂತೆ ರಾಜ್ಯದ ಎಲ್ಲ ಕಡೆ ಹೊಸ ದರ ಜಾರಿಗೆ ಬರಲಿದೆ ಎಂದು ಕಾನೂನು ಸಚಿವ ಎಚ್‌. ಕೆ. ಪಾಟೀಲ್‌ ತಿಳಿಸಿದ್ದಾರೆ.

ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ ಎಂದು ಎಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು