ಬೆಂಗಳೂರು : ಅಂತರರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ, ಪ್ರಗತಿಪರ ಚಿಂತಕ ಕೆ.ಟಿ.ಶಿವಪ್ರಸಾದ್ (79) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಕಿಡ್ನಿ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಅವರು ದೀರ್ಘ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಖ್ಯಾತ ಉದ್ಯಮಿ ಕಾರ್ಲೆ ಅವರ ಪುತ್ರರಾಗಿದ್ದ ಅವರು ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಆಪ್ತ ಸ್ನೇಹಿತರಾಗಿದ್ದರು.

