ಬೆಂಗಳೂರು: ಏಪ್ರೀಲ್ 11 ರಂದು ನಡೆಯಬೇಕಿದ್ದ ಆರ್ಸಿಬಿ, ಮುಂಬೈ ಇಂಡಿಯನ್ಸ್ ಐಪಿಎಲ್ ಪಂದ್ಯ ರದ್ದು ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಹೀನಾಯ ಸೋಲು ಕಂಡಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಕೊಂಚ ಬೇಸರವಾಗಿದೆ ವಿರಾಟ್ ಕೊಹ್ಲಿ ಹೊರತು ಪಡಿಸಿ ಉಳಿದ ಆಟಗಾರರ ಪ್ರದರ್ಶನ ಆಪೇಕ್ಷೇಗಿಂತ ಕಡಿಮೆ ಇತ್ತು ಎನ್ನುವುದು ನೆಟ್ಟಿಗರ ಆರೋಪ.
ಇನ್ನು, ಆರ್ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ರಾತ್ರಿ ಮ್ಯಾಚ್ ನಡೆಯೋ ಕಾರಣ ಹನಿ ಮಳೆಯಾಗೋ ಸಾಧ್ಯತೆ ಇದೆ. ರಾತ್ರಿ 7 ಗಂಟೆಯಿಂದ 9ರ ನಡುವೆ ಮಳೆ ಬರುವ ಸಾಧ್ಯತೆ ಇದ್ದು, ಪಂದ್ಯ ರದ್ದು ಕೂಡ ಆಗಬಹುದು ಎಂಬ ಮಾಹಿತಿ ದೊರಕಿದೆ.