ಬೆಂಗಳೂರು: ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದಿದೆ. ಲ್ಯಾಂಡರ್ನಿಂದ ಹೊರಬಂದ ರೋವರ್ ತನ್ನ ಕಾರ್ಯವನ್ನೂ ಆರಂಭಿಸಿದೆ. ಇದೀಗ ಮೊದಲ ಬಾರಿಗೆ ಚಂದ್ರನ ಮೇಲ್ಮೈನಲ್ಲಿನ ಮಣ್ಣಿನ ತಾಪಮಾನದ ಅವಲೋಕವನ್ನು ಮಾಡಲಾಗಿದ್ದು, ಇಸ್ರೊ ಈ ಬಗ್ಗೆ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
10 ಸೆಂ.ಮೀ ಆಳದವರೆಗಿನ ತಾಪಮಾನದ ಮಾಹಿತಿ ಹಾಗೂ ತಾಪಮಾನದಲ್ಲಿ ವ್ಯತ್ಯಾಸ ಕಂಡುಬರುವ ಬಗ್ಗೆ ಗ್ರಾಫ್ವೊಂದನ್ನು ಹಂಚಿಕೊಂಡಿದೆ. ಗ್ರಾಫ್ನಲ್ಲಿ ಚಂದ್ರನ ಮೇಲ್ಮೈನಲ್ಲಿ ತಾಪಮಾನ ಬದಲಾವಣೆಯಾಗುವ ಬಗ್ಗೆ ಹೇಳಲಾಗಿದೆ. ಇದರ ಬಗೆಗಿನ ಸಂಪೂರ್ಣ ಅಧ್ಯಯನವನ್ನು ನಡೆಸಲಾಗುತ್ತಿದೆ’ ಎಂದು ಇಸ್ರೊ ಹೇಳಿದೆ.
ಅಹಮದಾಬಾದ್ನ ಭೌತಿಕ ಅನುಸಂಧಾನ ಪ್ರಯೋಗಾಲಯದ ಸಹಯೋಗದೊಂದಿಗೆ ಬಾಹ್ಯಾಕಾಶ ಭೌತಶಾಸ್ತ್ರ ಪ್ರಯೋಗಾಲಯ, ವಿಕ್ರಮ್ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (VSSC)ದಲ್ಲಿ ಅಧ್ಯಯನವನ್ನು ನಡೆಸಲಾಗುತ್ತಿದೆ ಎಂದು ಇಸ್ರೊ ಮಾಹಿತಿ ನೀಡಿದೆ.
Chandrayaan-3 Mission:
Here are the first observations from the ChaSTE payload onboard Vikram Lander.ChaSTE (Chandra's Surface Thermophysical Experiment) measures the temperature profile of the lunar topsoil around the pole, to understand the thermal behaviour of the moon's… pic.twitter.com/VZ1cjWHTnd
— ISRO (@isro) August 27, 2023