News Karnataka Kannada
Monday, April 29 2024
ಬೆಂಗಳೂರು

ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ: ಸಿಎಂ ಸಿದ್ದರಾಮಯ್ಯ

It is inhuman in god's eyes to take off clothes and come to temple: Siddaramaiah
Photo Credit : News Kannada

ಬೆಂಗಳೂರು: ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೇ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲೂ ಅಮಾನವೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇವರನ್ನು ಮುಂದಿಟ್ಟುಕೊಂಡು ತಾರತಮ್ಯ ಆಚರಿಸುವುದು ದೇವರಿಗೆ ಮಾಡುವ ಅವಮಾನ. ದೇವರನ್ನೇ ಮುಂದಿಟ್ಟುಕೊಂಡು ಜಾತಿ, ಧರ್ಮ ಸಂಘರ್ಷ ಸೃಷ್ಟಿಸುವ ವಿಕೃತಿಯನ್ನು ಈಗಲೂ ಆಚರಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಾತಿ, ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಶಕ್ತಿಗಳು ನಾರಾಯಣಗುರುಗಳ ಅವಧಿಯಲ್ಲೂ ಇದ್ದವು. ಈಗಲೂ ಇವೆ. ನಾರಾಯಣಗುರುಗಳು ಸಂಘರ್ಷಕ್ಕೆ ಕಾರಣ ಆಗದಂತೆ ಸಮಾಜದಲ್ಲಿ ವ್ಯಾಪಕ ಬದಲಾವಣೆ ತಂದರು. ಈ ತಾರತಮ್ಯಕ್ಕೆ ನಾರಾಯಣಗುರುಗಳು ಭಿನ್ನವಾದ ಆಚರಣೆ ಕಂಡುಕೊಂಡರು ಎಂದು ನಾರಾಯಣ ಗುರುವನ್ನು ಸಿಎಂ ಸ್ಮರಿಸಿದರು.

ನಿಮಗೆ ಪ್ರವೇಶವಿಲ್ಲದ ದೇವಸ್ಥಾನಗಳಿಗೆ ಹೋಗಲೇಬೇಡಿ. ನೀವೇ ನಿಮ್ಮ ದೇವರುಗಳಿಗೆ ದೇವಸ್ಥಾನ ಕಟ್ಟಿ ಪೂಜೆ ಮಾಡಿ ಎಂದು ನಾರಾಯಣ ಗುರುಗಳು ಹೇಳಿದ್ದರು. ಈ ಸಮಾಜ ಸುಧಾರಣೆಯ ಕ್ರಾಂತಿಕಾರಕ ಧಾರ್ಮಿಕ‌ ಚಳವಳಿ ಪರಿಣಾಮವಾಗಿ ಕೇರಳದಲ್ಲಿ 60 ದೇವಸ್ಥಾನಗಳನ್ನು ನಿರ್ಮಿಸಿದರು.

ಉಳಿದ ದೇವಸ್ಥಾನಗಳಿಗೆ ಪ್ರವೇಶ ಇಲ್ಲದ ಶೂದ್ರ ಮತ್ತು ದಲಿತ ಸಮುದಾಯವನ್ನು ತಾವೇ ಕಟ್ಟಿಸಿದ ದೇವಸ್ಥಾನಗಳಿಗೆ ಪ್ರವೇಶಿಸುವಂತೆ ಕ್ರಾಂತಿ ಮಾಡಿದರು ಎಂದು ಹಲವು ನಿದರ್ಶನಗಳನ್ನು ಉದಾಹರಣೆ ನೀಡಿ ಸಿದ್ದರಾಮಯ್ಯ ಮಾತನಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು