ಬೆಂಗಳೂರು: ಇಂದು ಬೆಳಿಗ್ಗೆ ಐಟಿ ಅಧಿಕಾರಿಗಳು ಬೇಟೆ ಶುರುಮಾಡಿದ್ದು, ಬೆಂಗಳೂರಿನ ಬಿಲ್ಡರ್ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬಿಲ್ಡರ್ಗಳ ಮನೆಯ ಜೊತೆಗೆ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 20ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿಯನ್ನು ಮಾಡಿ, ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರಿನ ಕೆಆರ್ ಪುರಂ, ಕೊಡಿಗೇಹಳ್ಳಿ ಸೇರಿ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ನಂಜುಂಡೇಶ್ವರ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್ ಸೇರಿದಂತೆ ಹಲವು ಬಿಲ್ಡರ್ ಕಚೇರಿ, ಮನೆಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.