Bengaluru 22°C
Ad

ದರ್ಶನ್ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸುವ ಸಾಧ್ಯತೆ!

ದರ್ಶನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲು ತಯಾರಿ ನಡೆಸಿದ್ದಾರೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು.

ಬೆಂಗಳೂರು: ದರ್ಶನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಲು ತಯಾರಿ ನಡೆಸಿದ್ದಾರೆ. ಇದು ಕೂಡ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 85 ಲಕ್ಷ ರೂಪಾಯಿ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದರು. ಆ ಹಣದ ಮೂಲ ಏನು ಎಂಬುದನ್ನು ತಿಳಿಯುವ ಉದ್ದೇಶದಿಂದ ಐಟಿ ಅಧಿಕಾರಿಗಳು ತನಿಖೆ ಮಾಡಲು ಮುಂದಾಗಿದ್ದಾರೆ.

ದರ್ಶನ್ ಮನೆ ಮೇಲೆ ಐಟಿ ದಾಳಿ ಮಾಡಲು ಅನುಮತಿ ಕೇಳಿ ನ್ಯಾಯಾಲಯಕ್ಕೆ ಅಧಿಕಾರಿಗಳು ಮನವಿ ಸಲ್ಲಿಸಿದ್ದರು. 24ನೇ ಎಸಿಎಂಎಂ ಕೋರ್ಟ್​ ಅನುಮತಿ ನೀಡಿದೆ. ಆ ಬಳಿಕ ಬಳ್ಳಾರಿ ಜೈಲಿನಲ್ಲಿರುವ ದರ್ಶನ್​ಗೆ ನೋಟಿಸ್ ಜಾರಿ‌ ಮಾಡಲಾಗಿದೆ. ಇಂದು (ಸೆ.23) ಮಧ್ಯಾಹ್ನ 2.45ಕ್ಕೆ ಬಳ್ಳಾರಿ ಜೈಲಿನಲ್ಲಿ ದರ್ಶನ್ ಅವರನ್ನು ಅಧಿಕಾರಿಗಳು ಭೇಟಿ ಮಾಡಿ ನೋಟಿಸ್​ ನೀಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ನಡೆದ ಬಳಿಕ ಶವ ಸಾಗಿಸಲು ಲಕ್ಷಾಂತರ ರೂಪಾಯಿ ಹಣ ವ್ಯಯಿಸಲಾಗಿತ್ತು. ಅಲ್ಲದೇ ಇಡೀ ಕೃತ್ಯದ ಹಲವು ಹಂತಗಳಲ್ಲಿ ಹಣ ಹರಿದಾಡಿದೆ ಎಂಬುದು ತನಿಖೆ ವೇಳೆ ತಿಳಿದುಬಂತು. ಕೃತ್ಯಕ್ಕೆ ಬಳಸಿದ್ದ ಹಣದ ಮೂಲದ ಬಗ್ಗೆ ಬಳ್ಳಾರಿ ಜೈಲಿನಲ್ಲಿ ನಟನ ಹೇಳಿಕೆಯನ್ನು ಐಟಿ ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ. ಕೋರ್ಟ್ ಆದೇಶದ ಮೇಲೆ ದಾಳಿ‌ ಮಾಡಲು ಐಟಿ ಅಧಿಕಾರಿಗಳು ನಿರ್ಧರಿಸಿದ್ದಾರೆ.

 

.

Ad
Ad
Nk Channel Final 21 09 2023