ಬೆಂಗಳೂರು : ನಟಿ ಶಿಲ್ಪಾಶೆಟ್ಟಿ ಒಡೆತನದಲ್ಲಿರುವ ಬೆಂಗಳೂರಿನ ಬ್ಯಾಸ್ಟಿಯನ್‌ ಪಬ್‌ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ್ದಾರೆ. ಅಕ್ರಮ ಹಣದ ವಹಿವಾಟು ಆರೋಪದ ಮೇಲೆ ಹಾಗೂ ಅವಧಿ ಮೀರಿ ಪಬ್ ನಡೆಸುತ್ತಿದ್ದ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇತ್ತೀಚಿಗಷ್ಟೇ ಶಿಲ್ಪಾ ಶೆಟ್ಟಿ ಮತ್ತು ರಾಜ್‌ ಕುಂದ್ರಾಗೆ ಸೇರಿದ ಆಸ್ತಿಗಳ ಮೇಲೆ ಐಟಿ ದಾಳಿ ನಡೆದಿತ್ತು. ಅಕ್ರಮ ವಹಿವಾಟು, ಹಣದ ವರ್ಗಾವಣೆ, ತೆರಿಗೆ ವಂಚನೆ ಆರೋಪಗಳಡಿಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿತ್ತು. ಈ ದಾಳಿಯ ಮುಂದುವರೆದ ಭಾಗವಾಗಿ ಇಂದು ಬೆಂಗಳೂರಿನ ಪಬ್‌ ಮೇಲೂ ಸಹ ದಾಳಿ ನಡೆಸಲಾಗಿದೆ.