ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿನ ಸೀನಿಯರ್ ಕರೆಸ್ಪಾಂಡೆಂಟ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ವಿವರ, ಪ್ರಮುಖ ದಿನಾಂಕ, ಇತರೆ ಮಾಹಿತಿಗಳನ್ನು ಈ ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಇನ್ನಿತರ ಸಂಬಂಧಿತ ವಿಭಾಗದಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿ ಹೊಂದಿರಬೇಕು.
ಇತರೆ ಅರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾದೇಶಿಕ ಭಾಷೆ ಹಿಡಿತದ ಜೊತೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಜ್ಞಾನವಿರಬೇಕು. ಹಾಗೇ ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷ ಕಾರ್ಯಾನುಭವ ಇರಬೇಕು.
ವೇತನ: ಈ ಹುದ್ದೆಗೆ ಆಯ್ಕೆಯಾಗುವವರಿಗೆ ಮಾಸಿಕ 80,000 ದಿಂದ 1,25,000 ರೂ. ವೇತನ ನಿಗದಿಪಡಿಸಲಾಗಿದೆ. ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯನ್ನು applications.prasarbharati.org ಇಲ್ಲಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಜನವರಿ 31 ಕಡೆಯ ದಿನವಾಗಿದ್ದು, ಈ ಹುದ್ದೆಯನ್ನು ಎರಡು ವರ್ಷದ ಗುತ್ತಿಗೆ ಅವಧಿ ಮೇರೆಗೆ ನೇಮಕ ಮಾಡಲಾಗುವುದು. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು prasarbharati.gov.in ಇಲ್ಲಿಗೆ ಭೇಟಿ ನೀಡಬೇಕಿದೆ.