ಬೆಂಗಳೂರು: ನವೆಂಬರ್ 26ರಂದು ನಡೆಯಲಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು(ಕೆ-ಸೆಟ್23)ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಾರಣಾಂತರಗಳಿಂದ ಮುಂದೂಡಿದೆ. ಡಿಸೆಂಬರ್ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ತಿಳಿಸಿದ್ದಾರೆ.
ಇನ್ನು ಇತ್ತೀಚೆಗಷ್ಟೆ ವಿವಿಧ ನಿಗಮ ಮಂಡಳಿಗಳ ವಿವಿಧ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಪರೀಕ್ಷಾ ಅಕ್ರಮದ ಆರೋಪದ ನಡುವೆ ಮತ್ತೊಂದು ಪರೀಕ್ಷೆ ನಡೆಸುವುದು ಬೇಡ ಎನ್ನುವ ಕಾರಣಕ್ಕಾಗಿ ನ. 26 ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆ ಮುಂದೂಡಿಕೆ ಮಾಡಿರಬಹುದು ಎನ್ನಲಾಗಿದೆ.