ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್.ಚಲುವರಾಯಸ್ವಾಮಿ, ಶಾಸಕ ರಿಜ್ವಾನ್ ಅರ್ಷದ್, ಆರ್. ವಿ.ದೇಶಪಾಂಡೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.