ಬೆಂಗಳೂರು: 6ನೇ ವಿಧಾನಸಭೆಯ ಮೊದಲ ಅಧಿವೇಶನ ಆರಂಭವಾಗಿದೆ. ಮೊದಲ ದಿನದ ಅಧಿವೇಶನ ಆರಂಭವಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕಚೇರಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಮುಖ್ಯಮಂತ್ರಿ ಕಚೇರಿಯಲ್ಲಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದಾರೆ. ಶಾಸಕರ ಶಿಫಾರಸ್ಸು ತಂದರೇ ಸಾಲದು 30 ಲಕ್ಷ ದುಡ್ಡು ತನ್ನಿ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದರು.
ಈ ವಿಚಾರವಾಗಿ ಕಾಂಗ್ರೆಸ್ ನಾಯಕರು ಸಾಕ್ಷಿ ಕೇಳಿದ್ದರು. ಇದಕ್ಕೆ ಶಾಸಕ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಕ್ರಿಯಿಸಿ ಮಾಧ್ಯಮಗಳ ಮುಂದೆ ಪೆನ್ ಡ್ರೈವ್ ತೋರಿಸಿ ಇದರಲ್ಲಿ ವರ್ಗಾವಣೆ ಕುರಿತಾದ ಆಡಿಯೋ ಇದೆ ಎಂದು ಹೇಳಿದ್ದರು. ಈ ವಿಚಾರವನ್ನು ಹೆಚ್.ಡಿ ಕುಮಾರಸ್ವಾಮಿಯವರು ಸದನದಲ್ಲಿ ಪ್ರಸ್ತಾಪಿಸುತ್ತಿದ್ದಂತೆ ಗದ್ದಲ ಎದ್ದಿತು.
ವಿಧಾನಸಭೆಯಲ್ಲಿ ಕೆ.ಜೆ.ಜಾರ್ಜ್ ಹಾಗೂ ಹೆಚ್.ಡಿ ಕುಮಾರಸ್ವಾಮಿ ಅವರ ನಡುವೆ ವಾಗ್ವಾದ ನಡೆಯಿತು. ಇಂಧನ ಇಲಾಖೆಯಲ್ಲಿ ವರ್ಗಾವಣೆ ದಂಧೆ ನಡೆದಿದೆ ಎಂದು ಹೆಚ್ಡಿ ಕುಮಾರಸ್ವಾಮಿಯವರು ಆರೋಪ ಮಾಡಿದರು. ಇದಕ್ಕೆ ಸಚಿವ ಕೆಜೆ ಜಾರ್ಚ್ ಅವರು ಪ್ರತ್ಯುತ್ತರ ನೀಡಿ ನನ್ನ ಬಳಿ ಪೆನ್ಡ್ರೈವ್ ಇದೆ, ಅದರಲ್ಲಿ ಸಾಕ್ಷ್ಯವಿದೆ ಎಂದು ಹೇಳುತ್ತೀರಿ. ನಿಮ್ಮ ಬಳಿ ಯಾವ ಸಾಕ್ಷ್ಯವಿದೆ, ಅದನ್ನು ಸ್ಪೀಕರ್ಗೆ ನೀಡಿ ಎಂದರು.