News Karnataka Kannada
Saturday, May 04 2024
ಬೆಂಗಳೂರು

ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್

Karntaka Bandh Spẗ ̄
Photo Credit : News Kannada

ಬೆಂಗಳೂರು: ರಾಜ್ಯದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಇದೇ ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ಕೊಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ.

ಈ ಬಗ್ಗೆ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಅಧಿಕೃತ ಘೋಷಣೆ ಮಾಡಿದ್ದು, ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಸೆ.29ರಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದ್ದು, ಎಲ್ಲರು ಸಹಕಾರ ನೀಡಬೇಕೆಂದು ಮನವಿ ಮಾಡಿಕೊಂಡರು.

ಕಾವೇರಿ ನದಿ ನೀರು ಹಂಚಿಕೆ ವಿವಾದ, ಮಹದಾಯಿ ಯೋಜನೆ, ಕೃಷ್ಣಾನದಿ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ವಿಚಾರವಾಗಿ ಸೆ.29ರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ಸದ್ಯಕ್ಕೆ ಕರ್ನಾಟಕ ಬಂದ್​ಗೆ ಓಲಾ ಊಬರ್ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಅವರು ಬೆಂಬಲವನ್ನು ಘೋಷಿಸಿದ್ದಾರೆ. ಇನ್ನು ಇದಕ್ಕೆ ಕನ್ನಡಪರ ಸಂಘಟನೆಗಳು ಸಹ ಬೆಂಗಳೂರು ಬಂದ್ ಬದಲಾಗಿ ಕರ್ನಾಟಕ ಬಂದ್​ಗೆ ಬೆಂಬಲ ನೀಡಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು