ಬೆಂಗಳೂರು: ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ರಾಜ್ಯದಲ್ಲಿ ಒಂದು ವರ್ಷದ ಮಟ್ಟಿಗೆ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದೀಗ ಈ ಆದೇಶವನ್ನು ಹಿಂಪಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಮಾರಾಟದ ಮೇಲೆ ವಿಧಿಸಲಾಗಿದ್ದ ಒಂದು ವರ್ಷದ ನಿಷೇಧದ ಆದೇಶವನ್ನು ಕರ್ನಾಟಕ ಸರ್ಕಾರ ದಿಢೀರ್ ಹಿಂಪಡೆದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ಹೊರಡಿಸಲಾಗಿದ್ದ ಈ ನಿಷೇಧಿತ ಅಧಿಸೂಚನೆಯನ್ನು ಕೇವಲ ಎರಡೇ ದಿನಗಳಲ್ಲಿ ವಾಪಸ್ ಪಡೆದುಕೊಂಡಿರುವುದು ಭಾರಿ ಕುತೂಹಲ ಮೂಡಿಸಿದೆ.

View this post on Instagram

A post shared by News Karnataka (@newskarnataka)