News Karnataka Kannada
Tuesday, April 23 2024
Cricket
ಬೆಂಗಳೂರು

ಇನ್ಮುಂದೆ ಕರ್ನಾಟಕದಲ್ಲಿ ಮದ್ಯ ಮತ್ತಷ್ಟು ದುಬಾರಿ

liquor
Photo Credit : By Author

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ ಅವರು, ಈ ಯೋಜನೆಗಳಿಗೆ ಹಣ ಹೊಂದಿಸಲು ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ 14ನೇ ಬಜೆಟ್​ ಮಂಡನೆ ಬೆನ್ನಲ್ಲೇ ಅಬಕಾರಿ ತೆರಿಗೆ ಹೆಚ್ಚಳವಾಗಿದೆ.

ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಇದರಿಂದ ವಿವಿಧ ಬ್ರ್ಯಾಂಡ್​ಗಳ ಮದ್ಯ ಬೆಲೆ ಹೆಚ್ಚಳವಾಗಲಿದೆ. ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇ. 175 ರಿಂದ 185 ಕ್ಕೆ ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ.  2023-24ರ ಹಣಕಾಸು ವರ್ಷದಲ್ಲಿ ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಸರ್ಕಾರ ನಿಗದಿ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 1 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು