ಬೆಂಗಳೂರು: ರಾಜ್ಯ ಸರ್ಕಾರ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಹಾಗೂ ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ10% ರಷ್ಟು ಶುಲ್ಕ ಏರಿಕೆ ಮಾಡುವುದಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಆದೇಶವನ್ನು ಕೂಡ ಹೊರಡಿಸಿದೆ.
ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ 10ರಷ್ಟು ಏರಿಕೆಗೆ ಅವಕಾಶ ನೀಡಿದ್ದು, ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ10% ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಸ್ತುತ ವರ್ಷದಿಂದಲೇ ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ.
ಇತ್ತ ಯುವನಿಧಿಯಲ್ಲಿ ಕೊಡುತ್ತಿರುವ ಹಣ ಮತ್ತೊಂದು ರೀತಿಯಲ್ಲಿ ಸರ್ಕಾರ ವಾಪಸ್ ಪಡೆಯಲು ತೀರ್ಮಾನಿಸಿದಂತಿದೆ. ಇನ್ನು ಮುಂದೆ ರಾಜ್ಯದಲ್ಲಿ ಪದವಿ ಶಿಕ್ಷಣವೂ ದುಬಾರಿಯಾಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.