Bengaluru 28°C
Ad

ಕರ್ನಾಟಕದ ರೆವಿನ್ಯೂ ಇಲಾಖೆಯಲ್ಲಿ ಬೃಹತ್ ಹುದ್ದೆಗಳ ನೇಮಕಾತಿ

Recruitment

ಬೆಂಗಳೂರು: ಕರ್ನಾಟಕ ಆದಾಯ ಇಲಾಖೆಯಲ್ಲಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಲಾಗುತ್ತಿದೆ. ಈಗಾಗಲೇ ಇದರ ಅಧಿಸೂಚನೆಯನ್ನು ಪ್ರಕಟ ಮಾಡಲಾಗಿತ್ತು. ಹಲವು ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಕೂಡ ಸಲ್ಲಿಕೆ ಮಾಡಿದ್ದರು. ಆದರೆ ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ಮಾಡಿದ್ದರಿಂದ ಅಪ್ಲೇ ಮಾಡಿರದ ಅಭ್ಯರ್ಥಿಗಳು ಈಗ ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ಮಾಹಿತಿ, ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಪ್ರಮುಖ ದಿನಾಂಕ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣ ವಿವರ ಇಲ್ಲಿ ಕೊಡಲಾಗಿದೆ. ಇದೆಲ್ಲವನ್ನು ಅಭ್ಯರ್ಥಿಗಳು ತಿಳಿದುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಈ ಹುದ್ದೆಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ 20/02/2024ರಂದು ಅಧಿಸೂಚನೆ ಪ್ರಕಟಿಸಿತ್ತು. 05/04/2024ರಿಂದ ಅರ್ಜಿಗಳು ಆರಂಭ ಮಾಡಿ ಪೂರ್ಣಗೊಳಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ವಯೋಮಿತಿ ಸಡಿಲಿಕೆ ಮಾಡಿದ್ದರಿಂದ ಅರ್ಜಿ ಸಲ್ಲಿಕೆ ಮಾಡಲು ಇನ್ನಷ್ಟು ಕಾಲಾವಕಾಶ ನೀಡಲಾಗಿದೆ.

ವೇತನಶ್ರೇಣಿ; ಮಾಸಿಕ ₹21,400 ರಿಂದ ₹42,000

ಶೈಕ್ಷಣಿಕ ಅರ್ಹತೆ; ಅಭ್ಯರ್ಥಿಗಳು 12ನೇ ತರಗತಿ ಪೂರ್ಣಗೊಳಿಸಿರಬೇಕು
ಡಿಪ್ಲೋಮಾ, 2 ವರ್ಷದ ಐಟಿಐ, ಜೆಎಲ್​ಡಿಸಿ ಮುಗಿಸಿದವರು ಅರ್ಜಿ ಹಾಕಬಹುದು
ಅರ್ಜಿ ಸಲ್ಲಿಕೆ ಮಾಡುವ ವಿಧಾನ; ಆನ್​ಲೈನ್ ಮಾತ್ರ

ಹುದ್ದೆಯ ಹೆಸರು– ಗ್ರಾಮ ಆಡಳಿತ ಅಧಿಕಾರಿ
ಒಟ್ಟು ಹುದ್ದೆಗಳು ಎಷ್ಟು; 1,000

ವಯೋಮಿತಿ; 18 ವರ್ಷದಿಂದ 40 ವರ್ಷದ ಒಳಗಿನ ಅಭ್ಯರ್ಥಿಗಳು ಅಪ್ಲೇ ಮಾಡಬಹುದು.
ಎಸ್​ಸಿ, ಎಸ್​​​ಟಿ, ಪ್ರವರ್ಗ- 1 ಅಭ್ಯರ್ಥಿಗಳು- 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು- 38 ವರ್ಷ
ಸಾಮಾನ್ಯ ಅಭ್ಯರ್ಥಿಗಳು- 35 ವರ್ಷ ಮಾತ್ರ

ಅರ್ಜಿ ಸಲ್ಲಿಕೆ ಮಾಡಬೇಕೆಂದರೆ ಈ ಲಿಂಕ್ ಕ್ಲಿಕ್ ಮಾಡಿ- https://cetonline.karnataka.gov.in/kea/vacrec24

ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ- 28/09/2024
ಶುಲ್ಕ ಪಾವತಿಸಲು ಕೊನೆ ದಿನಾಂಕ- 29/09/2024

Ad
Ad
Nk Channel Final 21 09 2023