Ad

ಸ್ಮಾರ್ಟ್ ಫೋನ್ ಬಿಡಿಭಾಗ ತಯಾರಿಕೆ ಘಟಕ: ದ.ಕೊರಿಯಾ ಜತೆ ಕರ್ನಾಟಕ ಒಪ್ಪಂದ

ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ.

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಪರೀಕ್ಷಿಸುವ ಯಂತ್ರಗಳನ್ನು ತಯಾರಿಸುವ ಘಟಕ ಆರಂಭಿಸುವ ಯೋಜನೆಯ ಒಪ್ಪಂದಕ್ಕೆ ದಕ್ಷಿಣ ಕೊರಿಯಾದ ಹೈವಿಷನ್ ಕಂಪನಿಯು ಕರ್ನಾಟಕ ಸರ್ಕಾರದ ಜತೆ ಶುಕ್ರವಾರ ಸೋಲ್‌ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿದೆ.

Ad
300x250 2

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಹೈವಿಷನ್‌ ಸಿಇಒ ಚೋಯಿ ಡೂ-ವನ್‌ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಕ್ಯಾಮೆರಾ ಇನ್‌ಸ್ಪೆಕ್ಷನ್‌ ಮಷಿನ್ಸ್‌ ತಯಾರಿಕಾ ಘಟಕವು ಫಾಕ್ಸ್‌ಕಾನ್‌ನ ತಯಾರಿಕಾ ಘಟಕದ ಸಮೀಪ ಕಾರ್ಯಾರಂಭ ಮಾಡಲಿದೆ. ಇದರಿಂದ ರಾಜ್ಯದ ಎಲೆಕ್ಟ್ರಾನಿಕ್ಸ್‌ ತಯಾರಿಕಾ ಉದ್ಯಮದ ಬೆಳವಣಿಗೆಗೆ ನೆರವಾಗಲಿದೆ.

ಎಲ್ಎಕ್ಸ್ ಇಂಟರ್‌ನ್ಯಾಷನಲ್ ಕಾರ್ಪ್‌ ಮುಖ್ಯಸ್ಥರ ಭೇಟಿ ಸಂದರ್ಭದಲ್ಲಿ ವಿದ್ಯುತ್‌ ಚಾಲಿತ ವಾಹನ, ಬ್ಯಾಟರಿ ತಯಾರಿಕೆ ಸಾಧ್ಯತೆ ಮತ್ತು ವಹಿವಾಟು ವಿಸ್ತರಣೆ ಅವಕಾಶಗಳ ಬಗ್ಗೆ ಸಚಿವ ಎಂ.ಬಿ. ಪಾಟೀಲ ಚರ್ಚೆ ನಡೆಸಿದರು.

 

Ad
Ad
Nk Channel Final 21 09 2023
Ad