Bengaluru 23°C
Ad

ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಆಗಸ್ಟ್‌ 27ಕ್ಕೆ ಮುಂದೂಡಿಕೆ

2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

Ad

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

Ad
Ad
Ad
Nk Channel Final 21 09 2023