ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್ಲಿಫ್ಟ್ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ ಹೆಚ್ ಎ ಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದು, ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಆಗಮಿಸಲಿದ್ದಾರೆ.
ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.