ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯ ಬ್ಯಾಗ್‌ ನಲ್ಲಿ ಚಾಕು ಪತ್ತೆ

ಬೆಂಗಳೂರು: ಪೂರ್ವ ದ್ವಾರದಿಂದ ವಿಧಾನಸೌಧ ಪ್ರವೇಶಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿ ಚಾಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಪೊಲೀಸರು ಮೊದಲಿಗೆ ಮಹಿಳೆಯ ಕೈಯಿಂದ ಚಾಕು ವಶಕ್ಕೆ ಪಡೆದು ಆಕೆಗೆ ವಿಧಾನಸಭೆಯೊಳಗೆ ಪ್ರವೇಶಿಸಲು ಅವಕಾಶ ಕಲ್ಪಿಸಿದ್ದರು. ಬಳಿಕ ಪ್ರಕರಣದ ಗಂಭೀರತೆ ಅರಿತು ಆಕೆಯನ್ನು ಕಟ್ಟಡದಿಂದ ಹೊರಗೆ ಕಳುಹಿಸಲಾಯಿತು.

ಮಹಿಳೆಯ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.  ಕಳೆದ ವಾರ ಬಜೆಟ್ ಮಂಡನೆ ವೇಳೆ ರಾಜ್ಯ ವಿಧಾನಸಭೆಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ವಿಧಾನಸೌಧ ಪ್ರವೇಶಿಸಿ ನಾನು ಮೊಣಕಾಲ್ಮೂರು ಶಾಸಕ ಎಂದು ಹೇಳಿಕೊಂಡು ಶಾಸಕರು ಕುಳಿತುಕೊಳ್ಳುವ ಕುರ್ಚಿಯಲ್ಲಿ ಕುಳಿತಿದ್ದ. ಅಲ್ಲದೆ ಡೆಪ್ಯುಟಿ ಸಿಎಂಗೆ ಹಸ್ತಲಾಘವ ಮಾಡಿದ್ದ. ಈ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದನ್ನು ಗಮನಿಸಬಹುದು. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಭದ್ರತಾ ಲೋಪದ ಬಗ್ಗೆ ಪೊಲೀಸರಿಂದ ವರದಿ ಕೇಳಿದ್ದರು.

Ashika S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

25 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

33 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

37 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

48 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

51 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

52 mins ago