ಬೆಂಗಳೂರು: ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ನಿಗದಿತ 20 ಓವರ್ನಲ್ಲಿ 3 ವಿಕೆಟ್ ನಷ್ಟಕ್ಕೆ ಬರೋಬ್ಬರಿ 287 ರನ್ ಕಲೆ ಹಾಕಿದೆ. ಈ ಮೂಲಕ ಎಲ್ಲಾ ದಾಖಲೆಗಳನ್ನು ಮುರಿದು ಐತಿಹಾಸಿಕ ದಾಖಲೆ ನಿರ್ಮಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಸೀಸನ್ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸನ್ರೈಸರ್ಸ್ ಹೈದರಾಬಾದ್ ಬರೋಬ್ಬರಿ 288 ರನ್ ಬೃಹತ್ ಟಾರ್ಗೆಟ್ ಕೊಟ್ಟಿದೆ.
ಇನ್ನು, ಹೈದರಾಬಾದ್ ನೀಡಿದ ಟಾರ್ಗೆಟ್ ಬೆನ್ನತ್ತಿದ ಆರ್ಸಿಬಿ ಉತ್ತಮ ಆರಂಭ ಪಡೆದುಕೊಂಡಿದೆ. ಆರ್ಸಿಬಿ ಪರ ಓಪನರ್ಸ್ ಆಗಿ ಬಂದ ವಿರಾಟ್ ಕೊಹ್ಲಿ, ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡಿದ್ರು.
ಐಪಿಎಲ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೇವಲ 20 ಬಾಲ್ನಲ್ಲಿ 2 ಸಿಕ್ಸರ್, 4 ಫೋರ್ ಸಮೇತ 42 ರನ್ ಚಚ್ಚಿ ವಿಕೆಟ್ ಒಪ್ಪಿಸಿದ್ರು.
Whipped away for MAXIMUMS 🔥🔥@RCBTweets 79/0 in the chase at the end of powerplay!
Follow the Match ▶️ https://t.co/OOJP7G9bLr#TATAIPL | #RCBvSRH pic.twitter.com/hYbqBWDhPJ
— IndianPremierLeague (@IPL) April 15, 2024