ಕೋಲಾರ : ಕೋಲಾರದ ಒಂದೇ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಸದ್ಯ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂಧು ಕೋಲಾರ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇನ್ನು ನಿನ್ನೆ ಕೊಡಗು ಜಿಲ್ಲೆಯ ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯ 22 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ಕೋಲಾರದ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ.