ಕೋಲಾರ : ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ.
ಕೋಲಾರ ಹಾಗೂ ಮಾಲೂರು ತಾಲ್ಲೂಕಿನ ತಲಾ ಇಬ್ಬರಿಗೆ, ಕೆಜಿಎಫ್ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಇಬ್ಬರು ಗುಣಮುಖರಾಗಿ ಮನೆಗೆ ಮರಳಿದರು.