News Karnataka Kannada
Wednesday, May 08 2024
ಕೋಲಾರ

ಕೋಲಾರ ತಾಲ್ಲೂಕಿನಲ್ಲಿ ಸೋಂಕಿತರ ಸಾವಿನ ಸಂಖ್ಯೆ 639ಕ್ಕೆ ಏರಿಕೆ

coivd 19
Photo Credit :

ಕೋಲಾರ: ಜಿಲ್ಲೆಯ ಕೋಲಾರ ತಾಲ್ಲೂಕಿನ ಕೊರೊನಾ ಸೋಂಕಿತರಿಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 639ಕ್ಕೆ ಏರಿಕೆಯಾಗಿದೆ.ಹೊಸದಾಗಿ 6 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 4 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು