News Karnataka Kannada
Monday, April 29 2024
ಕೋಲಾರ

ಗಗನಕ್ಕೇರಿದ ಟೊಮೆಟೊ ಬೆಲೆ

Vegetable
Photo Credit :

ತುಮಕೂರು: ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಬೆಳೆ ಸಂಪೂರ್ಣ ನಾಶವಾಗಿದ್ದು ಮಾರುಕಟ್ಟೆಗಳಲ್ಲಿ ಆವಕ ಗಣನೀಯವಾಗಿ ಕುಸಿದಿದೆ. ಟೊಮೆಟೊ ಬೆಲೆ ಗಗನಕ್ಕೇರಿದ್ದು, ಜಿಲ್ಲೆಯ ಮಾರುಕಟ್ಟೆಗಳಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿ ಸಿದರೆ ಕೋಲಾರ ಜಿಲ್ಲೆಯಲ್ಲಿ ಅತಿ ಹೆಚ್ಚು ಸುಮಾರು 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತದೆ. ತಿಂಗಳ ಹಿಂದೆ ಕೋಲಾರ ಎಪಿಎಂಸಿಯಲ್ಲಿ 16,394 ಕ್ವಿಂಟಾಲ್‌ ಇದ್ದ ಟೊಮೆಟೊ ಆವಕ ಶನಿವಾರ 4,133 ಕ್ವಿಂಟಾಲ್‌ಗೆ ಇಳಿಕೆಯಾಗಿದೆ.

ಟೊಮೆಟೊ ಆವಕ ಕುಸಿದಿರುವ ಕಾರಣಕ್ಕೆ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ತಿಂಗಳ ಹಿಂದೆ ಸ್ಥಳೀಯ ಮಾರುಕಟ್ಟೆಯಲ್ಲಿ ಟೊಮೆಟೊ ಸಗಟು ಬೆಲೆ ಕ್ವಿಂಟಾಲ್‌ಗೆ ಕನಿಷ್ಠ ₹ 330 ಮತ್ತು ಗರಿಷ್ಠ ₹ 3,330 ಇತ್ತು. ಶನಿವಾರ ಟೊಮೆಟೊ ಬೆಲೆ ಕನಿಷ್ಠ ₹ 2,000 ಹಾಗೂ ಗರಿಷ್ಠ ₹ 6,660ಕ್ಕೆ ಜಿಗಿದಿದೆ. ಸಗಟು ದರಕ್ಕೆ ಅನುಗುಣವಾಗಿ ಚಿಲ್ಲರೆ ಮಾರಾಟ ದರವೂ ಏರಿಕೆಯಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು