Categories: ಕೋಲಾರ

ಟೊಮೆಟೊ ದರ ದಿಢೀರ್ ಏರಿಕೆ: ಬೆಳೆಗಾರರ ಮುಖದಲ್ಲಿ ಮಂದಹಾಸ

ಕೋಲಾರ : ಕಳೆದ ನಾಲ್ಕೈದು ತಿಂಗಳಿನಿಂದ ಬೇಡಿಕೆ ಇಲ್ಲದೆ ಕುಸಿತ ಕಂಡಿದ್ದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ದರ ಕುಸಿತದಿಂದ ಕಂಗಾಲಾಗಿದ್ದ ಬೆಳೆಗಾರರು ಈಗ ದರ ಏರಿಕೆಯಾಗುತ್ತಿರುವುದದಿಂದ ಖುಷಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಮಾರುಕಟ್ಟೆಗೆ ಹೊರರಾಜ್ಯಗಳ ವ್ಯಾಪಾರಿಗಳು ಬಂದು ಟೊಮೆಟೊ ಖರೀದಿಸುತ್ತಿದ್ದಾರೆ.

15 ಕೆಜಿ ಬಾಕ್ಸ್ ಗೆ 400 ರಿಂದ 800 ರೂ.ವರೆಗೂ ಮಾರಾಟವಾಗುತ್ತಿದೆ. ಎರಡು ತಿಂಗಳ ಹಿಂದೆಯಷ್ಟೇ ಟೊಮೆಟೊ ದರ ಕುಸಿತವಾಗಿದ್ದರಿಂದ ರೈತರು ಬೆಳೆ ಕಟಾವು ಮಾಡಿರಲಿಲ್ಲ. ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿದ್ದು, ಹೊರರಾಜ್ಯದ ವ್ಯಾಪಾರಿಗಳು ಬಾರದ ಕಾರಣ ಬೆಲೆ ಕುಸಿತವಾಗಿತ್ತು. ಈಗ ಬೆಳೆ ಕಡಿಮೆ ಇರುವುದರಿಂದ ಟೊಮೆಟೊ ದರ ದಿಢೀರ್ ಏರಿಕೆ ಕಂಡಿದೆ. ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಟೊಮೆಟೊ ದರ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ಗ್ರಾಹಕರಿಗೆ ನುಂಗಲಾದ ತುತ್ತಾಗಿದೆ. ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಟೊಮೆಟೊ ದರ ಏರಿಕೆಯ ಬಿಸಿ ತಟ್ಟಿದೆ.

Gayathri SG

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

10 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

24 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

48 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago