Categories: ಕೋಲಾರ

ಅಂತರಗಂಗೆ ಬೆಟ್ಟದ ಮೇಲೆ ಹಸಿರು ಬಣ್ಣ ಬಳಿದು, ಪಾಕ್‌ ಚಿಹ್ನೆ ಬರೆದ ಕಿಡಿಗೇಡಿಗಳು

ಕೋಲಾರ: ಧಾರ್ಮಿಕ ತಾಣವಾಗಿರುವ ಕೋಲಾರದ ಅಂತರಗಂಗೆ ಬೆಟ್ಟದಲ್ಲಿ ವಿವಾದಾತ್ಮಕ ಬರಹವೊಂದು ಬರೆಯಲಾಗಿದೆ. ಹೌದು ಸಾಹಸಮಯ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ಈ ತಾಣಕ್ಕೆ ಪ್ರತಿ ದಿನ ಸಾವಿರಾರು ಜನ ಬೇಟಿ ನೀಡುತ್ತಾರೆ.

ಆದರೀಗ ಇಲ್ಲಿ ಕೆಲ ಕಿಡಿಗೇಡಿಗಳು ಬೆಟ್ಟದ ಮೇಲೆ ಪಾಕ್‌ ಧ್ವಜದ ರೀತಿ ಹಸಿರು ಬಣ್ಣದ ಚಿತ್ರ ಬಿಡಿಸಿ, ಪಾಕ್‌ ಚಿಹ್ನೆ ಬಿಡಿಸಿದ್ದಾರೆ. ಅಲ್ಲದೆ ಅದರಲ್ಲಿ 786 ಎಂದು ಬರೆದಿದ್ದಾರೆ. ಇನ್ನು ಈ ವಿಚಾರ ಗ್ರಾಮಾಂತರ ಪೊಲೀಸರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಬರಹದ ಮೇಲೆ ಬಿಳಿ ಬಣ್ಣ ಬಳಿದು ಅಳಿಸಿಹಾಕಿದ್ದಾರೆ.

ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಪತ್ತೆಗೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

Ashitha S

Recent Posts

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

10 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

12 mins ago

ಏರ್‌ ಇಂಡಿಯಾ 30 ಸಿಬ್ಬಂದಿಗಳ ವಜಾ : 74 ವಿಮಾನಗಳ ಹಾರಾಟ ರದ್ದು

ಸಾಮೂಹಿಕ ಅನಾರೋಗ್ಯದ ರಜೆ ತೆಗೆದುಕೊಂಡ ಏರ್‌ ಇಂಡಿಯಾದ 30 ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಬುಧವಾರ (ಮೇ 9)ದಿಂದ ಸುಮಾರು 300 ಸಿಬ್ಬಂದಿ…

30 mins ago

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

39 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

46 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

59 mins ago