ಅನ್ನ ಉಪಾಹಾರ ಶೌಚಕ್ಕೆ ಪರದಾಡಿದ ಪರೀಕ್ಷೆ ಬರೆಯಲು ಬಂದ ಅಭ್ಯರ್ಥಿಗಳು‌

ಕೋಲಾರ: ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕಾನ್‌ಸ್ಟೆಬಲ್‌ ಹುದ್ದೆ ನೇಮಕಾತಿ ಪರೀಕ್ಷೆ ಕೋಲಾರ ನಗರದಲ್ಲಿ ಭಾನುವಾರ ನಡೆದಿದೆ. ಈ ಪರೀಕ್ಷೆಯನ್ನು ಬರೆಯಲು ರಾಜ್ಯದ ನಾನಾ ಕಡೆಗಳಿಂದ ಬಂದಿದ್ದ ಸಾವಿರಾರು ಅಭ್ಯರ್ಥಿಗಳು‌ ಮಲಗಲು, ಊಟ–ತಿಂಡಿ ಹಾಗೂ ಶೌಚಕ್ಕೆ ಸರಿಯಾದ ವ್ಯವಸ್ಥೆ ಇಲ್ಲದೇ ಪರದಾಡಿದ್ದಾರೆ.

ಬೆಳಗಾವಿ, ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ಹಾವೇರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳು ಶನಿವಾರವೇ ಕೋಲಾರ ನಗರಕ್ಕೆ ಬಂದಿದ್ದರು.

ಮಲಗಲು ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಕೆಲವರು ಬಸ್‌ ನಿಲ್ದಾಣ, ರೈಲು ನಿಲ್ದಾಣದಲ್ಲೇ ಮಲಗಿದರೆ, ಇನ್ನೂ ಕೆಲವರು ದೇವಸ್ಥಾನ, ಅಂಗಡಿ, ಮಳಿಗೆಗಳ ಮುಂದಿನ ಆವರಣದಲ್ಲಿ ಮಲಗಿದ್ದಾರೆ.

ಇನ್ನು ಹಲವರು ಶನಿವಾರ ರಾತ್ರಿಯಿಡೀ ಪರೀಕ್ಷಾ ಕೇಂದ್ರಗಳ ಬಳಿಯ ರಸ್ತೆ ಬದಿಯಲ್ಲೇ ಮಲಗಿದರು. ಕೆಲವರು ಮಾತ್ರ ಲಾಡ್ಜ್‌ ಸೇರಿದಂತೆ ವಿವಿಧೆಡೆ ವಸತಿ ವ್ಯವಸ್ಥೆ ಮಾಡಿಕೊಂಡಿದ್ದರು.

3,064 ಹುದ್ದೆಗಳ ಭರ್ತಿಗೆ ಕೋಲಾರ ನಗರದ ವಿವಿಧ ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಿತು. ಪೊಲೀಸ್ ಇಲಾಖೆಯ ಅಧಿಸೂಚನೆಯಲ್ಲಿರುವಂತೆ ಕೋಲಾರ ಜಿಲ್ಲೆಗೆ 44 ಹುದ್ದೆ ಹಾಗೂ ಕೆಜಿಎಫ್‌ಗೆ 14 ಹುದ್ದೆ ವರ್ಗೀಕರಣ ಮಾಡಲಾಗಿದೆ.

ಶನಿವಾರ ಮಧ್ಯಾಹ್ನದ ವೇಳೆಗೆ ನಗರ ತಲುಪಿದ ಹಲವರು ರಸ್ತೆ ಬದಿಯ ಗೂಡಂಗಡಿ, ತಳ್ಳು ಗಾಡಿಗಳಲ್ಲಿ ಊಟ, ತಿಂಡಿ ಮಾಡಿ ಉದ್ಯಾನಗಳಲ್ಲಿ ಕುಳಿತು ಓದಿದರು. ರಾತ್ರಿ ಆಗುತ್ತಿದ್ದಂತೆ ಮಲಗಲು ಸಮಸ್ಯೆ ಎದುರಾಯಿತು.

 

 

Ramya Bolantoor

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago