News Karnataka Kannada
Sunday, April 28 2024
ಕೋಲಾರ

ಕಿಡ್ನಾಪ್ ಆದ ಮಗು ರಕ್ಷಣೆ: ಕೋಲಾರ ಪೊಲೀಸ್‌ ಶ್ಲಾಘಿಸಿದ ಸಿಎಂ

Cm Kolar
Photo Credit : Twitter

ಕೋಲಾರ: ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಪೊಲೀಸರ ಮಿಂಚಿನ ಕಾರ್ಯಾಚರಣೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಇಂದು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಪ್ರಕರಣ ಬೇಧಿಸಿದ ಪೊಲೀಸ್ ಸಿಬ್ಬಂದಿಗಳಿಗೆ ನನ್ನ ಅಭಿನಂದನೆಗಳು’ ಎಂದು ಹೇಳಿದ್ದಾರೆ.

 

ಕೋಲಾರದ ಜಿಲ್ಲಾಸ್ಪತ್ರೆಯಿಂದ ಗುರುವಾರ ಸಂಜೆ ಮಹಿಳೆಯರ ತಂಡ ಗಂಡು ಮಗುವನ್ನು ಅಪಹರಣ ಮಾಡಿತ್ತು. ಸಂಜೆ 7 ಗಂಟೆಯ ವೇಳೆಗೆ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋಲಾರ ಜಿಲ್ಲಾ ಪೊಲೀಸರು ಮಗು ಪತ್ತೆಗೆ ವಿಶೇಷ ತಂಡವನ್ನು ರಚನೆ ಮಾಡಿದ್ದರು.

ಸಿಸಿಟಿವಿ ಪರಿಶೀಲನೆ ಮಾಲೂರು ಪಟ್ಟಣದ ಪಟೇಲರ ಬೀದಿ ನಿವಾಸಿ ನಂದಿನಿ, ಪೂವರಸನ್ ದಂಪತಿಯ ಗಂಡು ಮಗುವನ್ನು ಕೋಲಾರ ನಗರದ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಯಿಂದ ಅಪಹರಣ ಮಾಡಲಾಗಿತ್ತು. ಮಹಿಳೆಯರು ಬ್ಯಾಗ್‌ನಲ್ಲಿ ಮಗುವನ್ನು ಕದ್ದು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಮಗುವಿನ ಹೆರಿಗೆ ಬಳಿಕ ತಾಯಿ ನಂದಿನಿ ಬಾಣಂತಿ ಕೊಠಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 7 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿಯೇ ಉಳಿಸಿಕೊಳ್ಳಲಾಗಿತ್ತು. ನಂದಿನಿ ಮತ್ತು ಅವರ ತಾಯಿ ಚಲನವಲನ ಗಮನಿಸಿದ್ದ ಮೂವರು ಮಹಿಳೆಯರು ನಂದಿನಿ ಅವರ ತಾಯಿ ವಾರ್ಡ್‌ನಿಂದ ಹೊರ ಹೋದಾಗ ಮಗುವನ್ನು ಅಪಹರಿಸಿದ್ದರು.

ರಾಧಮ್ಮ ವಾರ್ಡ್‌ಗೆ ಬಂದು ನೋಡಿದಾಗ ಮಗು ಕಾಣೆಯಾಗಿತ್ತು. ಕೂಡಲೇ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಯಿತು. ಆಗ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಮಗುವನ್ನು ಮಹಿಳೆಯರು ಎತ್ತಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆಗ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಮಗು ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋಲಾರ ನಗರ ಠಾಣೆ ಪೊಲೀಸರು ಮಗು ಪತ್ತೆಗಾಗಿ ಕಾರ್ಯಾಚರಣೆಯನ್ನು ಕೈಗೊಂಡರು. ತನಿಖೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿದರು. ತಂಡ ಸಿಸಿಟಿವಿ ದೃಶ್ಯಾವಳಿ ಆಧರಿಸಿ, ಮಗುವನ್ನು ಅಪಹರಣ ಮಾಡಿರುವ ಮಾರ್ಗವನ್ನು ವಿಶ್ಲೇಷಿಸಿ ತನಿಖೆ ಆರಂಭಿಸಿತು. ಇದೀಗ ಮಗುವನ್ನು ಪತ್ತೆ ಹಚ್ಚಿ ತಾಯಿ ಮಡಿಲಿಗೆ ಒಪ್ಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು