News Karnataka Kannada
Thursday, April 25 2024
ಕೋಲಾರ

ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ತಡೆದು ಪರಿಶೀಲಿಸಿದ ಅಧಿಕಾರಿಗಳು

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ಅಧಿಕಾರಿಗಳು ತಡೆದು ಪರಿಶೀಲಿಸಿದ ಘಟನೆ ಜಿಲ್ಲೆಯ ರಾಮಸಂದ್ರ ಬಳಿ ನಡೆದಿದೆ.
Photo Credit : NewsKarnataka

ಕೋಲಾರ: ಮದುವೆ ಆರತಕ್ಷತೆಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ಅಧಿಕಾರಿಗಳು ತಡೆದು ಪರಿಶೀಲಿಸಿದ ಘಟನೆ ಜಿಲ್ಲೆಯ ರಾಮಸಂದ್ರ ಬಳಿ ನಡೆದಿದೆ.

ಸಿಎಂ ಸಿದ್ದರಾಮಯ್ಯ ಅವರ ಕಾರನ್ನು ಕೋಲಾರ ಜಿಲ್ಲೆಯ ಗಡಿಯಲ್ಲಿ ಸ್ಥಾಪಿಸಲಾದ ರಾಮಸಂದ್ರ ಚೆಕ್ ಪೋಸ್ಟ್ ಬಳಿ ಪೋಲೀಸರು ತಪಾಸಣೆಗೆ ಒಳಪಡಿಸಿದ್ದಾರೆ.

ತಪಾಸಣೆಗೆ ಕಿಂಚಿತ್ತೂ ಬೇಸರಿಸಿಕೊಳ್ಳದ ಸಿಎಂ, ತಪಾಸಣೆಗೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಈ ವೇಳೆ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್ ಸುರೇಶ್ ಸಹ ಅವರ ಜೊತೆಗಿದ್ದರು.

ಕೋಲಾರ  ನಗರದ ಹೊರಭಾಗದಲ್ಲಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು