Categories: ಕೋಲಾರ

ಅಂತರಗಂಗೆ ಬೆಟ್ಟದ ಮೇಲೆ ವಿವಾದಾತ್ಮಕ ಬರಹ: ಓರ್ವ ಆರೋಪಿಯ ಬಂಧನ

ಕೋಲಾರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಅಂತರಗಂಗೆ ಬೆಟ್ಟದ ಬಂಡೆ ಕಲ್ಲುಗಳ ಮೇಲೆ ಹಸಿರು ಬಣ್ಣ ಬಳಿದು ವಿವಾದಾತ್ಮಕ ಬರಹ ಬರೆಯಲಾಗಿತ್ತು. ಘಟನೆ ತಿಳಿಯುತ್ತಿದ್ದಂತೆ ಕೋಲಾರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಬರಹದ ಮೇಲೆ ಬಿಳಿ ಬಣ್ಣ ಬಳಿದು ಅಳಿಸಿ ಹಾಕಿದ್ದರು. ಸದ್ಯ ಘಟನೆ ಸಂಬಂಧ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಟ್ಟದ ಮೇಲೆ ಪಾಕ್‌ ಧ್ವಜದ ರೀತಿ ಹಸಿರು ಬಣ್ಣದ ಚಿತ್ರ ಬಿಡಿಸಿ, ಪಾಕ್‌ ಚಿಹ್ನೆ ಬಿಡಿಸಿದ್ದಾರೆ. ಅಲ್ಲದೆ ಅದರಲ್ಲಿ 786 ಎಂದು ಬರೆದಿದ್ದಾರೆ. ಇನ್ನು ಈ ವಿಚಾರ ಗ್ರಾಮಾಂತರ ಪೊಲೀಸರಿಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿ ಬರಹದ ಮೇಲೆ ಬಿಳಿ ಬಣ್ಣ ಬಳಿದು ಅಳಿಸಿಹಾಕಿದ್ದರು. ಕಿಡಿಗೇಡಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಅವರ ಪತ್ತೆಗೆ ಪೊಲೀಸರಿಗೆ ಮನವಿ ಮಾಡಿದ್ದರು. ಅದರಂತೆ ಇದೀಗ ಓರ್ವ ಆರೋಪಿಯನ್ನು ಪೊಲೀಸರು ಬಂಧಸಿದ್ದಾರೆ.

Sneha Gowda

Recent Posts

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

2 mins ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

20 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

34 mins ago

ಇಂದು ಶಂಕರ ಜಯಂತಿ : ಶಂಕರಾಚಾರ್ಯರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

ಹೆಸರೇ ಸೂಚಿಸುವಂತೆ, ಆದಿ ಶಂಕರ ಜಯಂತಿಯನ್ನು ಭಾರತೀಯ ತತ್ವಜ್ಞಾನಿ ಮತ್ತು ದೇವತಾಶಾಸ್ತ್ರಜ್ಞ ಆದಿ ಶಂಕರರ ಜನ್ಮದಿನದ ಸವಿ ನೆನಪಿಗಾಗಿ ಆಚರಿಸಲಾಗುತ್ತದೆ.…

44 mins ago

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

8 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

9 hours ago