ಕೋಲಾರ: ಇಬ್ಬರು ಮಕ್ಕಳೊಂದಿಗೆ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ಸೀಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾರಾಯಣಸ್ವಾಮಿ (40), ಮಕ್ಕಳಾದ ಪವನ್ (12) ನಿತಿನ್ (10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821